ದಾವಣಗೆರೆ : ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.