ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಕುಟುಂಬದವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ನಕಲಿ ದಾಖಲೆ ಸೃಷ್ಟಿಸಿ ಅವುಗಳ ಬಳಸಿಕೊಂಡು ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ ₹12.48 ಕೋಟಿ ಸಾಲ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ.
ಈ ಕುರಿತು ಬೆಂಗಳೂರಿನ ಎಂ.ಜಿ. ರಸ್ತೆ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಡಿ.ಮೋದಿ ಅವರು ದೂರು ದಾಖಲಿಸಿದ್ದಾರೆ. ಶಿವರಾಮೇಗೌಡ, ಪತ್ನಿ ಸುಧಾ, ಮಗ ಚೇತನ್, ಸೊಸೆ ಭವ್ಯಾ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.