ಐಜ್ವಾಲ್: ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ದಂಪ, ಹಚ್ಚೆಕ್, ಪಲಕ್, ಥೊರಂಗ್ನಲ್ಲಿ ಎಂಎನ್ಎಫ್ ಪ್ರಾಬಲ್ಯ ಹೊಂದಿದೆ. ಈ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಸದ್ಯ ಮಿಜೋರಾಂನಲ್ಲಿ ಎಂಎನ್ಎಫ್ ಅಧಿಕಾರದಲ್ಲಿದೆ. ಈ ಚುನಾವಣೆಯಲ್ಲಿ ಎಂಎನ್ಎಫ್ಗೆ ಕಾಂಗ್ರೆಸ್, ಬಿಜೆಪಿ ಪ್ರಬಲ ಪೈಪೋಟಿ ನೀಡಲಿವೆ ಎನ್ನಲಾಗಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಒಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಮಿಜೋರಾಂ ಮತ್ತು ಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದೆ.

































