ಬೆಂಗಳೂರು : ಮುಂಗಾರು ಮಾರುತಗಳು ಬಹತೇಕ ರಾಜ್ಯವನ್ನು ಆವರಿಸಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ ಕಾಲಕ್ಕೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ, ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಗೋವಾ, ಕರ್ನಾಟಕ ಮತ್ತು ತೆಲಂಗಾಣದ, ರಾಯಲಸೀಮೆಯಲ್ಲಿ ಮುಂದುವರೆದಿದೆ. ಮುಂದಿನ 3 ರಿಂದ 4 ದಿನಗಳಲ್ಲಿ ಪಶ್ಚಿಮ, ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮುಂಗಾರು ಮಾರುತಗಳು ಅವರಿಸಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.