ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ ಅನುಮತಿ ರದ್ದತಿಗೆ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು ನಡೆಯಿತು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ ಇಂದು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುದೀರ್ಘವಾಗಿ ವಾದ ಮಂಡಿಸಿದರು. ನಂತರ ದೂರುದಾರರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ವಾದ ಮಂಡಿಸಿದರು. ಸುದೀರ್ಘವಾಗಿ ನಡೆದ ವಾದವನ್ನು ಆಲಿಸಿದ ಹೈಕೋರ್ಟ್ ಸೆಪ್ಟಂಬರ್ 2 ರಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.
