ಮೈಸೂರು: ಇಲ್ಲಿಗೆ ಸಮೀಪ ಕೆ.ಆರ್.ಎಸ್ ಹಿನ್ನೀರಿನ ಪ್ರದೇಶದ ಬಳಿ ಇರುವ ಖಾಸಗಿ ಜಮೀನಿನಲ್ಲಿ ಆಯೋಜಿಸಿದ್ದ ಪಾರ್ಟಿ ಮೇಲೆ ಪೊಲೀಸರು ತಡರಾತ್ರಿ ದಾಳಿ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಯುವಕ, ಯುವತಿಯರು ಸೇರಿ 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಅಬ್ಬರದ ಡಿಜೆ ಸಂಗೀತ ಏರ್ಪಡಿಸಲಾಗಿತ್ತು.ಇಲ್ಲಿ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ
ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಂ ರಾವತರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದ ಯುವಕ-ಯುವತಿಯರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಪಾರ್ಟಿಗಾಗಿ ಬಳಸಲಾದ ಸಂಗೀತ ಉಪಕರಣಗಳು ಹಾಗೂ 30ಕ್ಕೂ ಹೆಚ್ಚು ಕಾರುಗಳನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಭಾಗವಹಿಸಲು 25ಕ್ಕೂ ಹೆಚ್ಚು ಜೋಡಿಗಳು ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ
ರೇವು ಪಾರ್ಟಿ ಯಾರು ಆಯೋಜನೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಿದೆ” ಎಂದು ಎಸ್‌ಪಿ ವಿಷ್ಣುವರ್ಧನ್ ಹೇಳಿದರು.