ಮೈಸೂರು: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು, ಅಧಿಕಾರಿಗಳ ವಿಚಾರಣೆ ಮಾಡುತ್ತಿದ್ದಾರೆ. 20ಕ್ಕೂ ಹೆಚ್ಚು ಸಿಆರ್ಪಿಎಫ್ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
