ಬೆಂಗಳೂರು : ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು,ಸ ಆಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ತಿಂದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
				
															
                    
                    
                    
                    
                    

































