ನವದೆಹಲಿ: ರಾಜಸ್ಥಾನದಿಂದ ರಾಜ್ಯಸಭೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ, ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿಯ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಲೋಕಸಭೆಯಲ್ಲಿ ಆರು ಅವಧಿಗೆ ಸೇವೆ ಸಲ್ಲಿಸಿದ ನಂತರ ಸೋನಿಯಾ ಮೇಲ್ಮನೆಯಲ್ಲಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.