2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸುತ್ತೋಲೆ ಆಕ್ಷೇಪಿಸಿ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ
ಒಕ್ಕೂಟ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸಲ್ಲಿಸಿರುವ ರಿಟ್ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಆದೇಶಿಸಿದೆ.
