ರಾಜ್ಯಾದ್ಯಂತ 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಟ್ವಿಟ್ ಮಾಡಿದ ಅವರು, ಗ್ರಾಮ ಲೆಕ್ಕಿಗರು ಕಡತಗಳನ್ನು ತಾಲ್ಲೂಕು ಕಚೇರಿಗೆ ಒಯ್ಯುತ್ತಾರೆ. ಇದರಿಂದಾಗಿ ಪಂಚಾಯಿತಿ ಕಚೇರಿಗಳಲ್ಲಿ ಅವು ಇರುವುದಿಲ್ಲ. ಹೀಗಾಗಿ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಆದ್ದರಿಂದ ಗ್ರಾಮ ಲೆಕ್ಕಿಗರು ಎಲ್ಲಿ ಇರುತ್ತಾರೋ ಅಲ್ಲಿಂದಲೇ ಕೆಲಸ ಮಾಡಲು, ಮತ್ತು ಕಡತಗಳನ್ನು ಆನ್‌ಲೈನ್ ಮೂಲಕ ಕಳುಹಿಸಲು, ಅವರಿಗೆ ಇ-ಆಫೀಸ್ ಲಾಗ್‌ಇನ್ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.