ನವದೆಹಲಿ : ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜಿಲ್ಲಾಧಿಕಾರಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದ್ದು, ಅಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ಗೌತಮ್ ಬುದ್ಧ ನಗರದ ಜಿಲ್ಲಾಧಿಕಾರಿ ಮನೀಶ್ ವರ್ಮಾ ಅವರ ಅಧಿಕೃತ ಎಕ್ಸ್ ಖಾತೆಯಿಂದ ಆಕ್ಷೇ ಪಾರ್ಹ  ಪೋಸ್ಟ್ ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ
ಪರಿಗಣಿಸಲಾಗಿದ್ದು, ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಜಿಲ್ಲಾಧಿಕಾರಿಗಳ ‘ಎಕ್ಸ್’ ಖಾತೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕನ ಕುರಿತು ಅನುಚಿತ ಮತ್ತು ಸ್ವೀಕಾರಾರ್ಹ ವಲ್ಲದ ಕಾಮೆಂಟ್ ಅನ್ನು ಪೋಸ್ಟ್ ಮಾಡಲಾಗಿದೆ. ಕಳೆದ 10 ವರ್ಷ ಗಳಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ. ಇದು ಹೊಸ ಬೆಳವಣಿಗೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ಪವನ್ ಖೇರಾ ಪ್ರತಿಕ್ರಿಯಿಸಿದ್ದು, ಬಿಜೆಪಿ ಆಡಳಿತದಲ್ಲಿ ಈಗ ಐಎಎಸ್ ಅಧಿಕಾರಿಗಳಿಗೆ ಇಂತಹ ರಾಜಕೀಯ ಹೇಳಿಕೆಗಳನ್ನು ನೀಡಲು ಆದೇಶಿಸಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
				
															
                    
                    
                    
                    

































