ಬೇಕಾಗುವ ಪದಾರ್ಥಗಳು…
- ಅನ್ನ – 1 ಬಟ್ಟಲು
- ಅಣಬೆ – 150 ಗ್ರಾಂ (ತೊಳೆದು ಹೆಚ್ಚಿಟ್ಟುಕೊಂಡದ್ದು)
- ಬೆಳ್ಳುಳ್ಳಿ – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)
- ಈರುಳ್ಳಿ – ಅರ್ಧ ಬಟ್ಟಲು (ಸಣ್ಣಗೆ ಹೆಚ್ಚಿದ್ದು)
- ಕೊತ್ತಂಬರಿ ಸೊಪ್ಪು – ಸ್ವಲ್ಪ
- ಆಲಿವ್ ಆಯಿಲ್- 2 ಚಮಚ
- ಕಾಳುಮೆಣಸಿನ ಪುಡಿ – ಕಾಲು ಚಮಚ
- ಉಪ್ಪು – ಅಗತ್ಯಕ್ಕೆ ತಕ್ಕಷ್ಟು
- ಮೊದಲಿಗೆ ಒಂದು ಬಾಣಾಲೆಯಲ್ಲಿ ಆಲಿವ್ ಆಯಿಲ್ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ.
- ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ.
- ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿಯ ನಂತರ ಅದಕ್ಕೆ ಕಾಳುಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ.
- ಬಳಿಕ ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ 5ರಿಂದ 6 ನಿಮಿಷಗಳ ಕಾಲ ಚೆನ್ನಾಗಿ ಮಿಶ್ರಣ ಮಾಡಿ. ಈಗ ಮಶ್ರೂಮ್ ಫ್ರೈಡ್ರೈಸ್ ಸವಿಯಲು ಸಿದ್ಧ.