ನವದೆಹಲಿ: ಆರ್ಬಿಐನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್ಬಿಐನ ಬಡ್ಡಿದರ ಶೇ. 6.50ರಲ್ಲೇ ಮುಂದುವರಿಯಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಆಗಸ್ಟ್ 8ರಿಂದ ನಡೆದಿದ್ದ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿ ಸಭೆ ಇಂದು ಮುಕ್ತಾಯಗೊಂಡ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗವರ್ನರ್ ಶಕ್ತಿಕಾಂತ ದಾಸ್ , ರೆಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಲಾಗಿದ್ದು, ರಿವರ್ಸ್ ರೆಪೋ ಇತ್ಯಾದಿ ಇತರ ದರಗಳಲ್ಲೂ ಯಾವುದೇ ವ್ಯತ್ಯಯವಾಗಿಲ್ಲ ಎಂದರು.
ಇನ್ನು ಆರ್ಬಿಐನ ಸಮಿತಿಯು ಸತತ ಮೂರನೇ ಬಾರಿಗೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದ್ದು, ಸಮಿತಿಯು ಸತತ ಮೂರನೇ ಬಾರಿಗೆ ರೆಪೊ ದರವನ್ನು ಶೇಕಡಾ 6.5ರಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಿದೆ ಎಂದಿದ್ದಾರೆ.