ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನರ ಬಂಧನವಾಗಿದೆ. ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ. ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ.
ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಶವ ವಿಲೇವಾರಿ, ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ಹಣವನ್ನು ದರ್ಶನ್ ಅವರಿಂದ ಈಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.


































