ನವದೆಹಲಿ : ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಇನ್ನೇನು ಕೆಲವೇ ವಾರಗಳಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕವೂ ಘೋಷಣೆಯಾಗಲಿದೆ. ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಹರಿದಾಡುತ್ತಿದೆ.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 150 ಲೋಕಸಭಾ ಸ್ಥಾನಗಳಿಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದ್ದು, ವಿಶೇಷವಾಗಿ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಡ್ ನಟಿ ಕಂಗನಾ ರಾಣಾವತ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಹೊರಬೀಳುತ್ತಿದ್ದು, ಇದರಲ್ಲಿ ವಿಶೇಷವಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಹೆಸರು ಕೂಡ ಮುಂಚೂಣಿಯಲ್ಲಿದೆ. ಇನ್ನು, ಕಂಗನಾ ಕೂಡ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದು, ಇದರೊಂದಿಗೆ ಮಾಜಿ ಸಂಸದ ಮಹೇಶ್ವರ್ ಸಿಂಗ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ವಯಸ್ಸನ್ನು ಪರಿಗಣಿಸಿ ಮಾತ್ರ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು.