ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ಅಸ್ಥಿ, ಚರ್ಮ, ಮಾಂಸ, ರಕ್ತ, ಖಂಡದ ಚೀಲ
ಬಾ[ತೆ]ಗೆಟ್ಟೊಡಲ ನಾನೆಂತು ಸಲಹುವೆನಯ್ಯಾ?
ಹುರುಳಿಲ್ಲದಿಹ ಸಂಸಾರ
ಎಂದಿಂಗೆ ನಾನಿದ ಹೊತ್ತು ತೊಳಲುವುದೆ ಬಿಡುವೆನಯ್ಯಾ?
ಎಂದಿಂಗೆ ನಾನಿದರ ಸಂಶಯವನಳಿವೆನಯ್ಯಾ?
ಎಡಹಿ ಕೊಡ ನೀರೊಳಗೆ ಒಡೆದಂತೆ
ಎನ್ನೊಡಲೊಡೆದು ನಿಮ್ಮೊಳೆಂದು ನೆರೆವೆನೊ ಉಳಿಯುಮೇಶ್ವರಾ.
-ಉಳಿಯುಮೇಶ್ವರ ಚಿಕ್ಕಣ್ಣ