ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಇಂದು ಮುಂಜಾನೆ (35) ವಿಧಿವಶರಾಗಿದ್ದಾರೆ. ಇಂದು ಸಂಜೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.