ಚಿತ್ರದುರ್ಗ: ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸು ಸಂಬಂಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನ.
ಯೋಜನೆಗಳ ವಿವರ: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮ ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಸರಸ್ವತಿಪುರಂ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
































