ವಿಜಯಪುರ: ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಲೋಕಸಭೆ ಚುನಾವಣೆಯ 3ನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ನಂತರ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದರು.
ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಸಂಪೂರ್ಣವಾಗಿ ಡಿಕೆ ಶಿವಕುಮಾರ್ ವಶದಲ್ಲಿದೆ. ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಆರೋಪ ಮಾಡಿದ್ದಾರೆ.
 
				 
         
         
         
															 
                     
                     
                     
                    


































 
    
    
        