ಮುಂಬೈ:ಬಾಲಿವುಡ್ ಬೆಡಗಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಇದೇ ಸೆ.24ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಬಳಿಕ ಆರತಕ್ಷತೆ ಕಾಯಕ್ರಮ ಇರಲಿದ್ದು, ಮದುವೆ ಆರತಕ್ಷತೆಯ ಕಾರ್ಡ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
ರಾಘವ್- ಪರಿಣಿತಿ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್- ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಇತರ ರಾಜಕೀಯ ನಾಯಕರು ಮದುವೆಯಲ್ಲಿ ಭಾಗಿಯಾಗಲಿದ್ದಾರೆ. ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಮದುವೆ ನಡೆಯುವ ಲೀಲಾ ಪ್ಯಾಲೇಸ್ ಬಳಿ ಇರುವ ಐಷಾರಾಮಿ ಹೋಟೆಲ್‍ಗಳನ್ನು ಕಾಯ್ದಿರಿಸಲಾಗಿದೆ. ಪರಿಣಿತಿ, ಸಹೋದರಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಾಸ್ ಕೂಡ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.