ಚಂಡೀಗಢ:ಹರಿಯಾಣ ಚುನಾವಣೆಯಲ್ಲಿ ವಿನೇಶ್ ಫೋಗಟ್ಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ಇತ್ತೀಚೆಗೆ ವಿನೇಶ್ ಪಕ್ಷ ಸೇರ್ಪಡೆ ಆಗಿದ್ದರು.
ಹರಿಯಾಣದ ಜುಲಾನಾದಿಂದ ಫೋಗಟ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಗರ್ಹಿ ಸಂಪ್ಲಾ-ಕಿಲೋಯ್ ಮತ್ತು ರಾಜ್ಯ ಘಟಕದ ಮುಖ್ಯಸ್ಥ ಉದಯ್ ಭಾನ್ ಹೊಡಾಲ್ನಿಂದ ಸ್ಪರ್ಧಿಸಲಿದ್ದಾರೆ ಎಂಬುವುದಾಗಿ ಪಕ್ಷ ಚುನಾವಣೆಗೆ 31 ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.ಇದರ ಬೆನ್ನಲ್ಲೇ ವಿನೇಶ್ ಫೋಗಟ್ಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.