ಹರಿಯಾಣ : ಹರಿಯಾಣದ ಪಂಚಕುಲದಲ್ಲಿ ರಾಜ್ಯ ರಸ್ತೆ ಸಾರಿಗೆಯ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ವೇಸ್ ಬಸ್ ಪಲ್ಟಿಯಾಗಿದೆ.ಗಾಯಗೊಂಡವರನ್ನು ಪಂಚಕುಲದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಚಂಡೀಗಢ ಪಿಜಿಐಗೆ ಕಳುಹಿಸಲಾಗಿದೆ.
ಅಪಘಾತದಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಅಂದರೆ ಓವರ್ಲೋಡ್ ಮತ್ತು ರಸ್ತೆಯ ಕಳಪೆ ಸ್ಥಿತಿ ಕೂಡ ಅಪಘಾತಕ್ಕೆ ಹೆಚ್ಚುವರಿ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.