ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ.

































